ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ

0

ಪುತ್ತೂರು: ಧಾರವಾಡ ಚೇತನಾ ಪ್ರತಿಷ್ಠಾನದ ನೇತೃತ್ವದಲ್ಲಿ ಕಾಸರಗೋಡು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸಹಯೋಗದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ನೆಹರುನಗರದ ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರೋಹಿಣಿ ಎಂ.ಪಿ. ಆಚಾರ್ಯ ಅವರ ಅತ್ಯುತ್ತಮ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಜನವರಿ 24ರಂದು ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.

LEAVE A REPLY

Please enter your comment!
Please enter your name here