ಬೊಬ್ಬೆಕೇರಿ ಶಾಲೆಯಲ್ಲಿ ರಸ್ತೆ ಸುರಕ್ಷತೆ, ಪೋಕ್ಸೋ ಕಾಯ್ದೆ, ಮಕ್ಕಳ ಸುರಕ್ಷತೆ, ಮಾದಕ ದ್ರವ್ಯಗಳ ಜಾಗೃತಿ

0

ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಸ್ತೆ ಸುರಕ್ಷತೆ, ಮಕ್ಕಳ ಸುರಕ್ಷತೆ ಹಾಗೂ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವನ್ನು ಜ.29ರಂದು ಹಮ್ಮಿಕೊಳ್ಳಲಾಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಕಾಣಿಯೂರು ಬಿಟ್ ಪೊಲೀಸ್ ಗಂಗಾಧರ್ ಇವರು ಮಕ್ಕಳಿಗೆ ರಸ್ತೆ ಸುರಕ್ಷತೆ, ಪೋಕ್ಸೋ ಕಾಯ್ದೆ, ಮಕ್ಕಳ ಸುರಕ್ಷತೆ ಹಾಗೂ ಮಾದಕ ದ್ರವ್ಯಗಳ ಜಾಗೃತಿ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲದೆ ಮಕ್ಕಳನ್ನು ರಸ್ತೆ ಬದಿಗೆ ಕರೆದೊಯ್ದು ಪ್ರಾಯೋಗಿಕವಾಗಿ ರಸ್ತೆ ನಿಯಮಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಿದರು.


ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ವರ್ಷದ ಇಕೋ ಕ್ಲಬ್ ವತಿಯಿಂದ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಬಹುಮಾನ ವಿತರಣೆಯನ್ನು ಶಿಕ್ಷಕಿ ಸುಶ್ಮಿತಾ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ.ಸಿ.ಅಧ್ಯಕ್ಷರಾದ ಸುನಿತಾ ಗಣೇಶ್ ವಹಿಸಿದ್ದರು. ಶಾಲಾ ಮುಖ್ಯಗುರು ಶಶಿಕಲಾ ಎಂ.ಸ್ವಾಗತಿಸಿದರು. ಶಿಕ್ಷಕ ಜನಾರ್ದನರವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here