






ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ಸುತೇಶ್ ಅವರು ವರ್ಗಾವಣೆಯಾಗಿ ಬಂದಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವರಾದ ಇವರು 2016ನೇ ಬ್ಯಾಚ್ನ ಅಧಿಕಾರಿಯಾಗಿದ್ದು, ಮೊದಲಿಗೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಚಿಕ್ಕಮಗಳೂರು ಜಿಲ್ಲೆ, ದ.ಕ. ಜಿಲ್ಲೆಯ ಪೂಂಜಾಲಕಟ್ಟೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿದ್ದ (ಕಾನೂನು ಮತ್ತು ಸುವ್ಯವಸ್ಥೆ) ಅವಿನಾಶ್ ಗೌಡ ಅವರು ಅರಣ್ಯ ಸಂಚಾರಿ ದಳ ಕೊಳ್ಳೆಗಾಲ ಘಟಕಕ್ಕೆ ವರ್ಗಾವಣೆಗೊಂಡಿದ್ದರಿಂದ ಅವರ ತೆರವಾದ ಸ್ಥಾನಕ್ಕೆ ಸುತೇಶ್ ಅವರನ್ನು ವರ್ಗಾವಣೆಗೊಳಿಸಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶಿಸಿದ್ದರು.













