






ಪುತ್ತೂರು:ನೆಹರುನಗರದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮಾದಕ ವಸ್ತು ಸೇವನೆ ದೃಢಗೊಂಡಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜನಾರ್ದನ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭ ನೆಹರೂನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಿಚಾರಿಸಿ, ಅವರು ಮಾದಕ ದ್ರವ್ಯ ಸೇವನೆ ಮಾಡಿದ ಕುರಿತು ಸಂಶಯಗೊಂಡು ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಲಾಗಿತ್ತು.ಇಬ್ಬರ ಪೈಕಿ ಅಬ್ದುಲ್ ಕುಂಞ ಎಂಬಾತ ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.












