ಶ್ರೀ ಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಸಮಾಲೋಚನಾ ಸಭೆ-ಆಮಂತ್ರಣ ಪತ್ರಿಕೆ ಬಿಡುಗಡೆ

0

ಬಡಗನ್ನೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25ರಿಂದ ಮಾರ್ಚ್ 1 ರ ವರೆಗೆ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆ ಜ.30ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ನಡೆದು ಬಂದ ಹಾದಿಯನ್ನು ತಿಳಿಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ  ಸಂಜೀವ ಪೂಜಾರಿ ಬಿರ್ವ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾಥನಾಡಿ  ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ಕ್ಷೇತ್ರದ ಟ್ರಸ್ಟಿ  ಸುಜಿತಾ ವಿ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ  ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದ  ಉಪಾಧ್ಯಕ್ಷ  ಸುಂದರ ಪೂಜಾರಿ, ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷ  ಗುರುರಾಜ್ ಗುರಿಪಳ್ಳ, ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದ  ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್, ಬೆಳ್ತಂಗಡಿ  ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಬೆಳ್ತಂಗಡಿ ತಾಲೂಕು ಮಹಿಳಾ ಸಮಿತಿಯ ಕಾರ್ಯದರ್ಶಿ ರಾಜಶ್ರೀ ರಮಣ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಟ್ರಸ್ಟಿ ನಾರಾಯಣ ಮಚ್ಚಿನ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ನಿರ್ದೇಶಕರುಗಳಾದ ಸಂತೋಷ್ ಉಪ್ಪಾರ್, ಉಷಾ ಶರತ್ ಬಾರ್ಯ, ಗೋಪಾಲ ಪೂಜಾರಿ ಕೋಲಾಜೆ, ವಿಶ್ವನಾಥ್ ಪೂಜಾರಿ ದಡ್ಡಲ್ ಪಲ್ಕೆ , ಸಂತೋಷ್ ಕೆ ಸಿ ಫುದುವೆಟ್ಟು, ನಾರಾಯಣ ಪೂಜಾರಿ ಉಚ್ಚುರು ಮರೋಡಿ, ಜಯ ಪೂಜಾರಿ ನಡ, ಬಿ ಕಮಲಾಕ್ಷ ಕೋಟ್ಯಾನ್ ಬೆಳ್ತಂಗಡಿ, ಬಳೆಂಜ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಭಾಸ್ಕರ್ ವಿ ಎ ಬೆಳ್ತಂಗಡಿ, ಭಾಗವಹಿಸಿದ್ದರು.

 ಶ್ರೀ ಕ್ಷೇತ್ರದ ಟ್ರಸ್ಟಿ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಸಂಚಾಲಕ  ನಿತ್ಯಾನಂದ ನಾವರ ಸ್ವಾಗತಿಸಿ ಕಾರ್ಯಕ್ರಮ  ನಿರೂಪಿಸಿದರು. ಬೆಳ್ತಂಗಡಿ  ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಎಂ ಕೆ ಪ್ರಸಾದ್ ಶಿರ್ಲಾಲ್ ವಂದಿಸಿದರು.

LEAVE A REPLY

Please enter your comment!
Please enter your name here