






ಕಡಬ:ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಬಿಳಿನೆಲೆ ಶಾಖೆಯು ಇಲ್ಲಿನ ಗೋಕುಲ ಆರ್ಕೇಡ್ ನಲ್ಲಿ ಫೆ.5 ನೇ ಗುರುವಾರ ಶುಭಾರಂಭಗೊಳ್ಳಲಿದೆ.


ಆದಿಚುಂಚನಗಿರಿ ಮಂಗಳೂರು ಕಾವೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬೆಳಾಲು ಆರಿಕೋಡಿ ಶ್ರೀಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉದ್ಘಾಟಿಸಲಿದ್ದಾರೆ. ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಅಧ್ಯಕ್ಷ ಕೇಶವ ಅಮೈ, ಕಲಾಯಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ.



ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಬಿಳಿನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದ ದಿನೇಶ್ ಗೌಡ , ಸುಳ್ಯ ಟಿಎಪಿಎಂಸಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ದಿವಾನ ಸುದರ್ಶನ ಜೋಯಿಸ, ವಾಸ್ತ ತಜ್ಞ ಪ್ರಸಾದ್ ಮುನಿಯಂಗಳ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಬಿಳಿನೆಲೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಾದ್ಯಪ್ಪ ಗೌಡ ಎರ್ಮಾಯಿಲ್, ನೆಟ್ಟಣ ಕೆ.ಎನ್‌ಎಸ್ ಎಸ್ ಅಧ್ಯಕ್ಷ ಸುರೇಶ್ ನೆಟ್ಟಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಒಕ್ಕಲಿಗ ಗೌಡ ಸೇವಾ ಸಂಘದ ಬಿಳಿನೆಲೆ ಗ್ರಾಮ ಸಮಿತಿಯ ಅಧ್ಯಕ್ಷ ಗುಡ್ಡಪ್ಪ ಗೌಡ ಅಮೈ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ಚಂದ್ರ ಕಳಿಗೆ, ಬಿಳಿನೆಲೆ ಮಾಗಣೆ ಗೌಡರಾದ ದುಗ್ಗಪ್ಪ ಗೌಡ ಸೂಡ್ಲು ಅವರ ಗೌರವ ಉಪಸ್ಥಿತಿ ಇರಲಿದೆ ಎಂದು ಸಂಘದ ಉಪಾಧ್ಯಕ್ಷ ಚೇತನ್ ಆನೆಗುಂಡಿ ಹಾಗೂ ಪ್ರಭಂಧಕ ಸುರೇಶ್ ಪಿ. ಎ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










