ಮಾಣಿ ವಲಯ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರ ಸಭೆ

0

ವಿಟ್ಲ: ಸುಳ್ಯದಿಂದ ಮಂಗಳೂರಿನವರೆಗೆ ನಡೆಯಲಿರುವ ನರೇಗಾ ಬಚಾವೊ ಜನಾಂದೋಲನ ಪಾದಯಾತ್ರೆಯ ಪೂರ್ವಭಾವಿಯಾಗಿ ಹಾಗೂ ಪಕ್ಷ ಸಂಘಟನೆಯ ಸಲುವಾಗಿ ಮಾಣಿ ವಲಯ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರ ಸಭೆಯು ಮಾಣಿ ಕೊಡಾಜೆಯ ನಕ್ಷತ್ರ ಸಭಾಂಗಣದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈಯವರು ಮಾತನಾಡಿ, ಪಾದಯಾತ್ರೆಯ ಯಶಸ್ಸಿಗೆ ಸಹಕರಿಸುವಂತೆ ವಿನಂತಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷ ಚಂದ್ರಶೇಖರ ಭಂಡಾರಿಯವರು ಪ್ರಾಸ್ತಾವಿಕವಾಗಿ ಮಾತನಾಡಿ, ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗುವಂತೆ ತಿಳಿಸಿದರು.


ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯಂ.ಯಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರುಗಳಾದ ಬೇಬಿ ಕುಂದರ್, ಅಬ್ಬಾಸ್ ಆಲಿ, ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಮಹಿಳಾ ವಿಭಾಗದ ಅಧ್ಯಕ್ಷೆ ಐಡಾ ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಣಿ ಗ್ರಾಮ ಪಂಚಾಯತ್ ಸದಸ್ಯರು, ವಲಯದ ಮತ್ತು ಬೂತ್ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಮಾಣಿ ವಲಯ ಕಾಂಗ್ರೆಸ್ಸಿನ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here