ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೆ-ದರ್ಶನ ಬಲಿ, ಬಟ್ಟಲು ಕಾಣಿಕೆ, ಚಂಡಿಕಾ ಮಹಾಯಾಗ

0

ಕೆಮ್ಮಾಯಿ: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಫೆ.3ಮತ್ತು 4ರಂದು ನಡೆಯಿತು. ಫೆ.3ರಂದು ಬೆಳಿಗ್ಗೆ ಸಾಮೂಹಿಕ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ ಹಾಗೂ ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬೆಳಿಗ್ಗೆಯಿಂದ ಚಂಡಿಕಾ ಮಹಾ ಯಾಗ ಮಧ್ಯಾಹ್ನದ ವರೆಗೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ವಸಂತಕಟ್ಟೆ ಪೂಜೆ, ಕೆಮ್ಮಾಯಿ ಶ್ರೀಮಹಾವಿಷ್ಣು ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.

ಫೆ.4ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ದೇವರ ಬಲಿ ಉತ್ಸವ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ದೇವರ ಬಲಿ ಒಳಗಾಗಿ ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಶೀ ಮಹಾವಿಷ್ಣು ಮೂರ್ತಿ ಭಜನಾ ಮಂಡಳಿ ಕೆಮ್ಮಾಯಿ, ಪುತ್ತೂರು ಶ್ರೀಮಹಾಲಿಂಗೇಶ್ವರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ದೈವದ ಭಂಡಾರ ತೆಗೆದು ಪಿಲಿಭೂತ, ದೈವದ ನೇಮ ನಡಾವಳಿ ನಡೆಯಿತು. ಜಾತ್ರೆಯಲ್ಲಿ ಸಾವಿರಕ್ಕೂ ಅಧಿಕ ಮಂದಿಗೆ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ವತಿಯಿಂದ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು.ಅನ್ನಸಂತರ್ಪಣೆ ಅನ್ನದಾನ ಸೇವೆಯಲ್ಲಿ ಹಲವಾರು ಭಕ್ತರು ಕೈ ಜೋಡಿಸಿದರು. ಇವರು ಒಂದು ದಿನದ ಅನ್ನದಾನ ಸೇವೆ ಪ್ರಾಯೋಜಕತ್ವ ವಹಿಸಿಕೊಂಡಿದ್ದರು.


ಸಹಕಾರ:
ಜಾತ್ರಾ ಮಹೋತ್ಸವಕ್ಕೆ ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿ ಕೆಮ್ಮಾಯಿ, ಮಹಾವಿಷ್ಣುಮೂರ್ತಿ ಭಜನಾ ಮಂಡಳಿ ಕೆಮ್ಮಾಯಿ, ಶ್ರೀವಿಷ್ಣು ಯುವಕ ಮಂಡಲ ಕೆಮ್ಮಾಯಿ, ವೀರಮಾರುತಿ ಸೇವಾ ಟ್ರಸ್ಟ್ ದಾರಂದಕುಕ್ಕು, ಅಶ್ವ ಫ್ರೆಂಡ್ಸ್ ಭೀರ‍್ನಹಿತ್ಲು, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕೃಷ್ಣನಗರ, ಅಟೋರಿಕ್ಷಾ ಚಾಲಕ ಮಾಲಕರ ಸಂಘ ಕೆಮ್ಮಾಯಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳು, ಶ್ರೀ ಕ್ಷೇ.ಧ.ಗ್ರಾ.ಯೋ. ಚಿಕ್ಕಮುಡ್ನೂರು, ಸ್ವ-ಸಹಾಯ ಸಂಘ-ಸಂಸ್ಥೆಗಳು, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕೃಷ್ಣನಗರ, ಶ್ರೀವಿಷ್ಣು ಯುವಕ ಮಂಡಲ ಕೆಮ್ಮಾಯಿ, ಚಿಕ್ಕಮುಡ್ನೂರುರವರು ಸಹಕಾರ ನೀಡಿದ್ದರು. ಆಂಜನೇಯ ಸೌಂಡ್ಸ್‌ನ ಬೊಳುವಾರು ಮಧುರವರಿಂದ ಲೈಟಿಂಗ್ಸ್ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಪತಿ ಬೈಪಾಡಿತ್ತಾಯ, ಗೌರವಾಧ್ಯಕ್ಷ ಡಾ. ಅಶೋಕ್ ಪಡಿವಾಳ್ ಮೂಡಾಯೂರುಗುತ್ತು, ಶ್ರೀಧರ ಬೈಪಾಡಿತ್ತಾಯ, ದೇವಸ್ಥಾನದ ಅರ್ಚಕ ವೃಂದ, ಅಧ್ಯಕ್ಷರು, ಸದಸ್ಯರು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಸರ್ವ ಸದಸ್ಯರು ಉಪಸ್ಥಿತರಿದ್ದರು. ಬೈಪಾಡಿತ್ತಾಯ ಕುಟುಂಬಸ್ಥರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here