







ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ.) ಬೆಂಗಳೂರು, ಜಿಲ್ಲಾ ಘಟಕ ದಕ್ಷಿಣ ಕನ್ನಡ ಇದರ ವತಿಯಿಂದ ಸರಕಾರಿ/ಅನುದಾನಿತ/ ಅನುದಾನರಹಿತ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ಅಭಿನಂದನಾ ಕಾರ್ಯಕ್ರಮವು ಫೆ. 7 ರಂದು ಅಪರಾಹ್ನ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜರಗಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ, ಮಣಿಕ್ಕರ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ ರವರು ತಿಳಿಸಿದ್ದಾರೆ.












