






ರಾಮಕುಂಜ: ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ರಾಮಕುಂಜ ಗ್ರಾಮದ ಸಂಪ್ಯಾಡಿ ನಿವಾಸಿ ಯತೀಶ್ಕುಮಾರ್ ಬಾನಡ್ಕ ನೇಮಕಗೊಂಡಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್(ಗ್ರಾಮಾಂತರ) ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮುಹಮ್ಮದ್ ಆಲಿ ಅವರು ಈ ನೇಮಕ ಮಾಡಿ ಆದೇಶಿಸಿ ದ್ದಾರೆ. ಯತೀಶ್ಕುಮಾರ್ ಅವರು ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ಕಿಸಾನ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ರಾಮಕುಂಜ ಗ್ರಾ.ಪಂ.ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದಾರೆ.















