ಪಡುಮಲೆ: ಕರ್ನಪ್ಪಾಡಿ ಕೊಡಮನಿತ್ತಾಯ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಕರ್ನಪ್ಪಾಡಿ ಕೊಡಮನಿತ್ತಾಯ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ಧನ ಪೂಜಾರಿ ಪದಡ್ಕರವರ ನೇತೃತ್ವದಲ್ಲಿ ಫೆ.5ರಂದು ಬಿಡುಗಡೆ ಮಾಡಲಾಯಿತು.

ಅರಂಭದಲ್ಲಿ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರ ಮುಂದಿಟ್ಟು ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಬಿ ರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬಳಿಕ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರೈ ಕಟ್ಟಾವು, ಸದಸ್ಯರಾದ ಪುರಂದರ ರೈ ಕುದ್ಕಾಡಿ, ಶ್ರೀನಿವಾಸ್ ಗೌಡ ಕನ್ನಯ, ಉದಯ ರಾವ್ ಪಡುಮಲೆ, ಶ್ರೀ ಪೂಮಾಣಿ ಕಿನ್ನಿಮಾಣಿ ದೖೆವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವಿರಾಜ ರೈ ಸಜಂಕಾಡಿ, ಬಡಗನ್ನೂರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರ ಸುರೇಶ್ ರೖೆ ಪಲ್ಲತಾರು, ಪಡುಮಲೆ ಕಟೀಲು ಯಕ್ಷಗಾನ ಬಯಲಾಟ ಸಮಿತಿ ಕಾರ್ಯದರ್ಶಿ ಗಣೇಶ್ ಭಟ್ ಈಶಮೂಲೆ, ಸದಸ್ಯ ಅಪ್ಪಯ್ಯ ನಾಯ್ಕ ತಲೆಂಜಿ ದೇವಸ್ಥಾನದ ಕಛೇರಿ ನಿರ್ವಾಹಕ ಪುರಂದರ ರೈ ಸೇನೆರೆಮಜಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here