ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಕಚೇರಿಗೆ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಭೇಟಿ

0

ಸುಳ್ಯ: ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಕೆ.ಎಂ.ಮುಸ್ತಫ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ (ಬೂಡ) ಕಚೇರಿಗೆ ಭೇಟಿ ನೀಡಿ, ಮಾಸ್ಟರ್ ಪ್ಲಾನ್ ಸೇರಿದಂತೆ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಮಾಹಿತಿ ಸಂಗ್ರಹಿಸಿದರು.


ಈ ಸಂದರ್ಭದಲ್ಲಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಏಕ ವಿನ್ಯಾಸ ಅನುಮೋದನೆ, ವಾಸ್ತವ್ಯ ಮತ್ತು ವಾಣಿಜ್ಯ ಸ್ವತ್ತುಗಳಿಗೆ ಸಂಬಂಧಿಸಿದ ರಸ್ತೆ ಮಾರ್ಜಿನ್, ಯೋಜನಾ ನಿಯಮಗಳು ಮೊದಲಾದ ವಿಷಯಗಳ ಬಗ್ಗೆ ಸವಿಸ್ತಾರ ಚರ್ಚೆ ನಡೆಸಿದರು.


ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಬೇಬಿ ಕುಂದರ್ ಅವರು ಕೆ.ಎಂ.ಮುಸ್ತಫ ಅವರನ್ನು ಹಾರ ಮತ್ತು ಶಾಲು ಹಾಕಿ ಸ್ವಾಗತಿಸಿದರು.
ಈ ಭೇಟಿಯ ಸಂದರ್ಭದಲ್ಲಿ ಸದಸ್ಯ ಕಾರ್ಯದರ್ಶಿ ಗಾಯತ್ರಿ, ಪ್ರಾಧಿಕಾರದ ಸದಸ್ಯರಾದ ಮನೋಹರ್ ಕುಲಾಲ್, ಹರೀಶ್ ಅಜ್ಜಿಬೆಟ್ಟು, ಅಬ್ದುಲ್ ರಝಕ್ ಗುಡ್ಡಿನ ಬಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here