ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಆರೋಪಿಗೆ ಆಶ್ರಯ ನೀಡಿದ ತಂದೆಯ ಮೇಲಿನ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

0

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿದ ಪ್ರಕರಣದ ಆರೋಪಿಗೆ ಆಶ್ರಯ ನೀಡಿದ ಆತನ ತಂದೆಯ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣದ ಮುಂದಿನ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.


ಸಂತ್ರಸ್ತೆ ಯುವತಿ ಕಳೆದ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ನಡುವೆ ಆರೋಪಿ ತಲೆಮರೆಸಿಕೊಂಡಾಗ ಆತನಿಗೆ ಆಶ್ರಯ ನೀಡಿದ ಹಿನ್ನೆಲೆಯಲ್ಲಿ ಆರೋಪಿಯ ತಂದೆ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಮೂವರ ವಿರುದ್ದ ಬಿಎನ್ಎಸ್ ಸೆಕ್ಷನ್ 249ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಪೀಠ, ಯಾವುದೇ ಸ್ಪಷ್ಟ ಕಾರಣವಿಲ್ಲದೆ ಆರೋಪಿಯ ತಂದೆಯನ್ನು ಈ ಪ್ರಕರಣಕ್ಕೆ ಎಳೆದುಕೊಂಡಿದ್ದಾರೆ ಎಂದು ಗಮನಿಸಲಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ವಿಚಾರಣೆ ದಿನಾಂಕದ ತನಕ ಆರೋಪಿ ಕೃಷ್ಣ ಜೆ ರಾವ್ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ವಿರುದ್ಧದ ಪ್ರಕರಣದ ಮುಂದಿನ ವಿಚಾರಣೆಗೆ ತಡೆಯಾಜ್ಞೆ ನೀಡಿದೆ. ಆರೋಪಿ ಪರ ಹೈಕೋರ್ಟ್ ವಕೀಲರಾದ ಪಿ.ಪಿ ಹೆಗ್ಡೆ ವಾದಿಸಿದ್ದರು.

LEAVE A REPLY

Please enter your comment!
Please enter your name here