







ಪುತ್ತೂರು: ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ರಾಮಕೃಷ್ಣ ಪಿ.ಕೆರವರು ಫೆ.10 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.


ಈ ಸಂದರ್ಭದಲ್ಲಿ ರೋಟರಿ ವಲಯ ಐದರ ಅಸಿಸ್ಟೆಂಟ್ ಗವರ್ನರ್ ಬಾಲಕೃಷ್ಣ ಪೈ, ವಲಯ ಸೇನಾನಿ ಉಮಾನಾಥ್ ಪಿ.ಬಿ ರವರು ಭಾಗವಹಿಸಲಿದ್ದಾರೆ. ಬೆಳಿಗ್ಗೆ ಆಶ್ಮಿ ಕಂಫರ್ಟ್ ಬಳಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ.ರವರನ್ನು ಸ್ವಾಗತಿಸಿ ಬಳಿಕ ಬೀರಮಲೆ ಬೆಟ್ಟದಲ್ಲಿನ ಪ್ರಜ್ಞಾ ಆಶ್ರಮಕ್ಕೆ ಭೇಟಿ ನೀಡಿ ಕೊಡುಗೆಯನ್ನು ಹಸ್ತಾಂತರಿಸಲಿದ್ದಾರೆ. ಸಭಾ ಕಾರ್ಯಕ್ರಮ ಸಂಜೆ ಬಪ್ಪಳಿಗೆ ಬೈಪಾಸ್ ಆಶ್ಮಿ ಕಂಫರ್ಟ್ ಸಭಾಂಗಣದಲ್ಲಿ ಜರಗಲಿದೆ ಎಂದು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಚಂದ್ರಹಾಸ ರೈ ಬಿ, ಕಾರ್ಯದರ್ಶಿ ಜಯಪ್ರಕಾಶ್ ಎ.ಎಲ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಸನ್ಮಾನ…
ಇತ್ತೀಚೆಗೆ ಡಾಕ್ಟರೇಟ್ ಪದವಿ ಗಳಿಸಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಉಪನ್ಯಾಸಕಿ ಹಾಗೂ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸದಸ್ಯೆ ಡಾ.ಭಾರತಿ ಎಸ್.ರೈ, ಸಾಹಿತ್ಯ ಸಾಮಾಜಿಕ ಸೇವಾ ಸಾಧಕ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್, ರೋಟರಿ ಸೆಂಟ್ರಲ್ ನ ಯೋಜನೆಗಳಿಗೆ ಕೈ ಜೋಡಿಸುತ್ತಾ ಬಂದಿರುವ ಸ್ಟಾರ್ ಆಪ್ಟಿಕಲ್ಸ್ ನ ತಬ್ಸೀರ್, ಪುತ್ತೂರು ಡಯೋಗ್ನಾಸ್ಟಿಕ್ ಲ್ಯಾಬೋರೇಟರಿ ಮಾಲಕ ನೋಯಲ್ ಡಿ’ಸೋಜರವರುಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತದೆ.









