ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಧರ್ಮಸ್ಥಳ ಕ್ಷೇತ್ರದಿಂದ ಸಹಾಯಧನದ ಡಿಡಿ ವಿತರಣೆ

0

ಪುತ್ತೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ರೂ 3,00,000/- ಸಹಾಯಧನದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಎ ವಿತರಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುದರ ಜೊತೆಗೆ ಧಾರ್ಮಿಕ ಶ್ರದ್ಧಾ ಕೇಂದ್ರಗಳಾಗಿರುವ ದೇವಸ್ಥಾನ, ದೈವಸ್ಥಾನಗಳಿಗೆ ಹಲವಾರು ವರ್ಷಗಳಿಂದ ಕ್ಷೇತ್ರವು ಸಹಾಯಧನವನ್ನು ನೀಡುತ್ತಾ ಬಂದಿರುತ್ತದೆ. ಕ್ಷೇತ್ರದ ಸಹಾಯಧನದಿಂದ ಅದೆಷ್ಟೋ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ತಾಲೂಕು ಅಧ್ಯಕ್ಷರಾದ ಮಹೇಶ್‌ ಕೆ ಸವಣೂರು, ಯೋಜನಾಧಿಕಾರಿ ಪ್ರಕಾಶ್ ಕುಮಾರ್‌, ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜತ್ತಪ್ಪ ರೈ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗಣೇಶ್‌ ನಿಡ್ಡಣ್ಣಾಯ, ಕೋಶಾಧಿಕಾರಿ ಕೃಷ್ಣ ಭಟ್‌, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಐತ್ತಪ್ಪ ಗೌಡ, ವಿಠಲ ಗೌಡ, ತನಿಯಪ್ಪ ನಾಯ್ಕ ಕಾರ್ಲಾಡಿ, ಪುಷ್ಪಲತಾ ದರ್ಖಾಸು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here