ಐತ್ತೂರು; ಕಾಡುಕೋಣ ಬೇಟೆ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

0

ಕಾಣಿಯೂರು: ಕಡಬ ತಾಲೂಕಿನ ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಐತ್ತೂರು ಗ್ರಾಮದ ಮುಡೂರು ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದ ಕಾಡುಕೋಣ ಬೇಟೆ ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.


ಜ.25ರಂದು ಮುಡೂರು ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಕೆಎಫ್ ಡಿಸಿ ರಬ್ಬರ್ ನೆಡುತೋಪಿನಲ್ಲಿ ಕಾಡುಕೋಣ ಬೇಟೆಯಾಡಿ ಬಂದೂಕಿನಿಂದ ಕೊಂದು ಮಾಂಸ ತಯಾರಿಸುತ್ತಿದ್ದ ವೇಳೆ ಸುಬ್ರಹ್ಮಣ್ಯ ವಲಯ ಅರಣ್ಯಾಽಕಾರಿ ಮತ್ತು ಅವರ ತಂಡ ಸ್ಥಳಕ್ಕೆ ದಾಳಿ ನಡೆಸಿದ್ದು ಈ ವೇಳೆ ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದರು. ಅರಣ್ಯಾಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದಾಗ ಕಾಡುಕೋಣದ ಮೃತದೇಹದ ಅಂಗಾಂಗ ಕತ್ತರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಅಲ್ಲದೇ ಸ್ಥಳದಲ್ಲಿ ಆಯುಧಗಳು ಹಾಗೂ ಮೂರು ದ್ವಿಚಕ್ರವಾಹನಗಳು ಪತ್ತೆಯಾಗಿತ್ತು. ಸುಬ್ರಹ್ಮಣ್ಯ ವಲಯಾರಣ್ಯಾಽಕಾರಿ ವಿಮಲ್ ಬಾಬು ಅವರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕಾರ್ಯಪ್ರವೃತ್ತರಾಗಿದ್ದರು. ಈ ಮಧ್ಯೆ ಈ ಪ್ರಕರಣದ ಆರೋಪಿಗಳು ಎಂದು ಹೆಸರಿಸಲಾದ ಭುವನೇಶ್ವರ, ಜೀವನ್, ಸಚಿನ್, ಜೈನ್‌ವರ‍್ಕಿ, ಜೆಸ್ಟಿನ್ ಜೈನ್ ಎಂಬವರು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ನ್ಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿ ಷರತ್ತುಬದ್ಧ ಶರ್ತಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಫೆ.9ರಂದು ಆದೇಶಿಸಿದೆ. ಆರೋಪಿಗಳ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಯಂ.ವೆಂಕಪ್ಪ ಗೌಡ, ಚಂಪಾ ವಿ.ಗೌಡ, ರಾಜೇಶ್ ಬಿ.ಜಿ. ಹಾಗೂ ಶ್ಯಾಮಪ್ರಸಾದ್ ನಿಡ್ಯಮಲೆ ವಾದಿಸಿದ್ದರು.

LEAVE A REPLY

Please enter your comment!
Please enter your name here