






ಪುತ್ತೂರು: 300 ವರ್ಷಗಳ ಇತಿಹಾಸ ಇರುವ ಬೆಳ್ಳಿಪ್ಪಾಡಿ ಗ್ರಾಮದ ಹೃದಯಭಾಗದಲ್ಲಿರುವ ಕೋರಿಯ ಎಂಬಲ್ಲಿನ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮತ್ತು ನೇಮೋತ್ಸವ ಫೆ. 15 ರಿಂದ 17ರ ತನಕ ನಡೆಯಲಿದೆ ಎಂದು ಜೀರ್ಣೋದ್ದಾರ ಸಮಿತಿ ಕಾರ್ಯಾಧ್ಯಕ್ಷ ಡಾ.ಬಿ.ರಘು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಬೆಳ್ಳಿಪ್ಪಾಡಿ ಗ್ರಾಮ ದೈವಗಳ ಪೈಕಿ ಶ್ರೀ ಮೊಗೇರ್ಕಳ ದೈವಗಳು ಸಹ ಒಂದು ಎನ್ನುವುದಕ್ಕೆ ಗ್ರಾಮದ ಜನರು ಸಾಕ್ಷಿಯಾಗಿದ್ದಾರೆ. ದೈವಸ್ಥಾನದ ಮುಂಭಾಗ ಇರುವ ವೃತ್ತಾಕಾರದ ಶಿಲೆಯಲ್ಲಿ ಧರ್ಮದೈವ ನೆಲೆಯಾಗಿದೆ. ಎಡಭಾಗದಲ್ಲಿ ಕೊರಗತನಿಯ ದೈವ ನೆಲೆಗೊಂಡಿದೆ. ಮೊಗೇರ್ಕಳ ದೈವಗಳ ಜೊತೆ ತನ್ನಿಮಾನಿಗ ದೈವವನ್ನು ಆರಾಧಿಸಲಾಗುತ್ತಿದೆ. ಮುಗೇರ ಜನಾಂಗದ ಕುಟುಂಬದ ಧರ್ಮ ದೈವ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವವನ್ನು ಆರಾಧಿಸಲಾಗುತ್ತಿದೆ. 40 ವರ್ಷಗಳ ಹಿಂದೆ ದೈವಸ್ಥಾನವನ್ನು ಬೆಳ್ಳಿಪ್ಪಾಡಿ ಮನೆತನ ಹಾಗು 12 ಮನೆಯವರು, ಗ್ರಾಮಾಸ್ಥರಿಂದ ಹಾಗು ಮೊಗೇರ ಜನಾಂಗದವರು ಒಟ್ಟು ಸೇರಿ ಜಿರ್ಣೋದ್ಧಾರಗೊಳಿಸಲಾಯಿತು. ಇದೀಗ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪುನರ್ ಪ್ರತಿಷ್ಠೆಯಾಗಲಿದ್ದು, ದೈವಗಳಿಗೆ ದೈವಸ್ಥಾನ, ಕೊರಗಜ್ಜ ಕಟ್ಟೆ, ಕಟ್ಟೆ ಸುತ್ತಲು ಆವರಣಗೋಡೆ ಮುಂತಾದ ಕೆಲಸ ಕಾರ್ಯ ನಡೆಯುತ್ತಿದ್ದು, ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡು ಪುನರ್ ಪ್ರತಿಷ್ಠೆ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದರು.



ಜೀರ್ಣೋದ್ದಾರ ಸಮಿತಿ ಸಂಚಾಲಕ ಮೋಹನ್ ಪಕಳ ಕುಂಡಾಪು ಅವರು ಮಾತನಾಡಿ ಫೆ.14ರಂದು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಫೆ.15ರಂದು ಬೆಳಿಗ್ಗೆ ಗಂಟೆ 10.20ಕ್ಕೆ ಪುರೋಹಿತರಾದ ಗೋಪಾಲಕೃಷ್ಣ ತೋಳ್ಪಡಿತ್ತಾಯ ಅವರ ನೇತೃತ್ವದಲ್ಲಿ ನೂತನವಾಗಿ ಕಟ್ಟಿದ ದೈವಸ್ಥಾನದಲ್ಲಿ ಧರ್ಮದೈವ ಪಂಜುರ್ಲಿ, ಕಲ್ಲುರ್ಟಿ, ಗುಳಿಗ, ಕುಲದೇವರಾದ ಮುದ್ದ ಕಲಳ, ತನ್ನಿಮಾನಿಗ, ಕೊರಗತನಿಯ ಮತ್ತು ಚಾಮುಂಡಿ, ಗುಳಿಗ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ ಮತ್ತು ದೈವಗಳ ನೇಮೋತ್ಸವ ನಡೆಯಲಿದೆ. ಮಧ್ಯಾಹ್ನ ಗಂಟೆ 12ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬೆಳ್ಳಿಪ್ಪಾಡಿ ರಮಾನಾಥ ರೈ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ| ಬ್ರಿಜೇಶ್ ಚೌಟ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಗೌಡ ಇಂಜಾಡಿ, ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಕಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕೋಡಿಂಬಾಡಿ ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಕಿಶೋರ್, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾೖಕ್, ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಗೋಪಾಲಕೃಷ್ಣ ರೈ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ರಾವ್, ಮೊಗೇರ ಸಂಘದ ಅಧ್ಯಕ್ಷ ಸುಂದರ ಕೇಪುಳು ಸಹಿತ ಹಲವಾರು ಮಂದಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಫೆ. 16ರಂದು ರಾತ್ರಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಹರೀಶ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಜಿ.ಪಂ ಮಾಜಿ ಅಧ್ಯಕ್ಷ ಸೋಮನಾಥ, ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ರೈ ಚಾರಿಟೇಬಲ್ ಟ್ರಸ್ಟ್ನ ಕಾರ್ಯಾಧ್ಯಕ್ಷ ಸುದೇಶ್ ರೈ ಸಹಿತ ಹಲವಾರು ಮಂದಿ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಫೆ. 15ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಕುಣಿತ ಭಜನೆಯ ಬಳಿಕ ರಾತ್ರಿ ಗಂಟೆ 7ಕ್ಕೆ ಡಾ. ರವೀಶ ಪಡುಮಲೆ ಅವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಧರ್ಮದೈವ ಪಂಜುರ್ಲಿ, ಕಲ್ಲುರ್ಟಿ, ಗುಳಿಗ ದೈವದ ನೇಮೋತ್ಸವ ನಡೆಯಲಿದೆ. ಫೆ. 16ರಂದು ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ರಾತ್ರಿ ಗಂಟೆ 9ಕ್ಕೆ ಮೊಗೇರ್ಕಳ ಗರಡಿ ಇಳಿಯುವುದು, ರಾತ್ರಿ ಗಂಟೆ 11.30ಕ್ಕೆ ತನ್ನಿಮಾನಿಗ ಗರಡಿ ಇಳಿಯುವುದು. ಫೆ. 17ಕ್ಕೆ ಬೆಳಿಗ್ಗೆ ಕೊರಗತನಿಯ ನೇಮ ನಡೆಯಲಿದೆ ಎಂದವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಬೆಳ್ಳಿಪ್ಪಾಡಿ ಕಾರ್ತಿಕ್ ರೈ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಗದೀಶ್ ಕಜೆ, ಗೌರವ ಸಲಹೆಗಾರ ಸುಂದರ ಸಾಲಿಯಾನ್, ಸಂಚಾಲಕ ಲಕ್ಷ್ಮಣ ಗೌಡ ಕಂಬದಡ್ಡ ಉಪಸ್ಥಿತರಿದ್ದರು.










