







ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮದ ಕರ್ನಪ್ಪಾಡಿ ಗರಡಿಯ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡ ಚಾವಡಿಯಲ್ಲಿ ಕೊಡಮಣಿತ್ತಾಯ ದೈವದ ಪ್ರತಿಷ್ಠೆ ಮತ್ತು ನಾಗಬಿರ್ಮೆರ್ ಪುನರ್ ಪ್ರತಿಷ್ಠೆ ಹಾಗೂ ಶ್ರೀ ಬ್ರಹ್ಮಬೈದೇರುಗಳ ನೇಮೋತ್ಸವ ಕಾರ್ಯಕ್ರಮ ಫೆ.28 ರಿಂದ ಮಾ.2 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.12 ರ ಸಂಕ್ರಮಣದಂದು ಸಂಜೆ ಪಾಣಾಜೆ ಗ್ರಾಮದ ಗ್ರಾಮಸ್ಥರ ಪರವಾಗಿ ಆರ್ಲಪದವಿನ ದೈವಸ್ಥಾನದಲ್ಲಿ ಆಡಳಿತ ಮೊಕ್ತೇಸರರಾದ ಶ್ರೀ ಕೃಷ್ಣ ಬೊಳಿಲ್ಲಾಯ ಬಿಡುಗಡೆಗೊಳಿಸಿ, ವಿತರಿಸಿದರು.


ಕಾರ್ಯಕ್ರಮ ಸುಗಮವಾಗಿ ಸಾಗಲು ದೈವಗಳಲ್ಲಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗರಡಿಯ ಸೇವಾ ಸಮಿತಿ ಹಾಗೂ ಪ್ರತಿಷ್ಠಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.













