ಕುಂತೂರುಪದವು: ಬಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

0

ಕಡಬ: ಪೆರಾಬೆ ಗ್ರಾ.ಪಂ.ವ್ಯಾಪ್ತಿಯ ಕುಂತೂರುಪದವು ಸೈಂಟ್ ಜಾರ್ಜ್ ಹೈಸ್ಕೂಲಿನ ಎದರು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿ ಪೆರಾಬೆ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣವಾದ ಬಸ್ ಪ್ರಯಾಣಿಕರ ತಂಗುದಾಣವನ್ನು ಫೆ.13ರಂದು ಲೋಪಾರ್ಣಣೆ ಮಾಡಲಾಯಿತು.


ಉದ್ಘಾಟನೆ ನೆರವೇರಿಸಿದ ಪೆರಾಬೆ ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಅವರು ಮಾತನಾಡಿ, ಶಾಲಾ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಲ್ಲಿ ತುಂಗುದಾಣವನ್ನು ೧೫ನೇ ಹಣಕಾಸು ನಿಧಿಯಿಂದ ನಿರ್ಮಾಣ ಮಾಡಲಾಗಿದೆ. ತಂಗುದಾಣಕ್ಕಾಗಿ ಈ ಭಾಗದ ಪಂಚಾಯಿತಿ ಸದಸ್ಯರು ಹಾಗೂ ಶಾಲಾ ಆಡಳಿತ ಮಂಡಳಿಯವರು ಹಕ್ಕೊತ್ತಾಯ ಮಂಡಿಸುತ್ತಾ ಬಂದಿದ್ದರು ಎಂದರು. ಕೆ.ಎಸ್.ಆರ್.ಟಿ.ಸಿ. ನಿವೃತ್ತ ಸಂಚಾರ ನಿಯಂತ್ರಕ ಅಬ್ಬಾಸ್ ಕುಂತೂರು ಮಾತನಾಡಿ, ಬಸ್ಸು ಪ್ರಯಾಣಿಕರ ನೂತನ ತಂಗುದಾಣ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ನಿರ್ಮಾಣ ಮಾಡಲಾಗಿದೆ. ಇಲ್ಲಿ ಕೆ.ಎಸ್.ಆರ್.ಟಿ.ಸಿಯ ಎಲ್ಲಾ ಬಸ್ಸುಗಳು ನಿಲುಗಡೆಯಾಗಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.


ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಲ ಮುಖ್ಯ ಅತಿಥಿಯಾಗಿ ಮಾತನಾಡಿ ಪ್ರಯಾಣಿಕರ ತಂಗುದಾಣದ ಬಗ್ಗೆ ಸಾರ್ವಜನಿಕರಿಗೆ ಮಹತ್ತರವಾದ ಜವಾಬ್ದಾರಿಯಿದೆ. ಅದರ ಸ್ವಚ್ಛತೆ ಹಾಗೂ ನಿರ್ವಹಣೆಯನ್ನು ಕಾಪಾಡಿಕೊಂಡು ಬಂದರೆ ಅದನ್ನು ನಿರ್ಮಿಸಿಕೊಟ್ಟವರಿಗೆ ಗೌರವ ನೀಡಿದಂತೆ ಆಗುತ್ತದೆ ಎಂದರು. ಸೈಂಟ್‌ಜಾರ್ಜ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಹರಿಶ್ಚಂದ್ರ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಸೈಂಟ್ ಜಾರ್ಜ್ ಪ್ರೌಢಶಾಲಾ ಸಂಚಾಲಕ ಕೆ.ಎಸ್.ತೋಮಸ್, ಮಾಜಿ ಸಂಚಾಲಕ ವಿ.ಐ.ಅಬ್ರಹಾಂ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್ ರೈ, ಕುಂತೂರುಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸೋಮಪ್ಪ ಗೌಡ, ಉಪಾಧ್ಯಕ್ಷ ಪದ್ಮನಾಭ ಗೌಡ, ಪಂಚಾಯಿತಿ ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ರಾಜು, ಮೋಹಿನಿ, ಸಿಬಂದಿ ಪ್ರಜ್ವಲ್ ಪಟ್ಟೆ, ಸಾಮಾಜಿಕ ಕಾರ್ಯಕರ್ತೆ ಗುಲಾಬಿ, ಶಾಲಾ ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮ್ಮಿ ಸ್ವಾಗತಿಸಿದರು. ಪೆರಾಬೆ ಅರಿವು ಕೇಂದ್ರದ ಮೇಲ್ವಿಚಾರಕಿ ಜಯಕುಮಾರಿ ವಂದಿಸಿದರು.

LEAVE A REPLY

Please enter your comment!
Please enter your name here