







ಪುತ್ತೂರು: ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಫೆ.13ರಂದು ಶ್ರೀ ಅನ್ನಪೂಣೇಶ್ವರಿ ದೇವರ ಜಾತ್ರೋತ್ಸವ ಆರಂಭಗೊಂಡಿದೆ.


ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ಫೆ.13ರಂದು ಬೆಳಿಗ್ಗೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಗಣಪತಿ ಹವನ, ಕಲಾಶಭಿಷೇಕ, ನಾಗತಂಬಿಲ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ದೇವರ ಬಲಿ ಹೊರಟು ಉತ್ಸವ, ಪೇಟೆ ಸವಾರಿ, ಕಟ್ಟೆಪೂಜೆ ನಡೆಯಿತು.













