







ಪುತ್ತೂರು: ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು, ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರವು ಫೆ.15ರಂದು ಕೋರ್ಟ್ ರಸ್ತೆಯ ಲಯನ್ಸ್ ಸೇವಾ ಮಂದಿರದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.





ಶಿಬಿರದಲ್ಲಿ ನೇತ್ರ ತಜ್ಞರಿಂದ ಕಣ್ಣಿನ ಪರೀಕ್ಷೆ ಮತ್ತು ಸಲಹೆಗಗಳು, ಶಿಬಿರದಲ್ಲಿ ತಪಾಸಣೆಗೆ ಒಳಗಾಗಿ ಆವಶ್ಯಕತೆ ಕಂಡು ಬಂದವರಿಗೆ ಉಚಿತ ಶಸ್ತ್ರಚಿಕಿತ್ಸೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇವರಿಂದ, ಸಕ್ಕರೆ ಕಾಯಿಲೆಗೆ ರಕ್ತ ಪರೀಕ್ಷೆ, ರಕ್ತದ ಒತ್ತಡದ(ಬಿ.ಪಿ.) ಪರೀಕ್ಷೆ, ಉಚಿತ ಕನ್ನಡಕ ವಿತರಣೆ, ಚರ್ಮರೋಗ ತಪಾಸಣೆ ಮತ್ತು ಚಿಕಿತ್ಸೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು ಫಲಾನುಭವಿಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ 8746844989, 9071358521 ನಂಬರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.









