







ಪುತ್ತೂರು: ಫೆ.11ರಂದು ಮಂಗಳೂರು ಪುರಭವನದಲ್ಲಿ ನಡೆದ ಕನ್ನಡ ಶಾಲೆ ಉಳಿಸಿ, ಬೆಳೆಸಿ, ಅಭಿಯಾನದ ರಾಜ್ಯ ಸಮಾವೇಶದಲ್ಲಿ ದ.ಕ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾದ ಬೆಟ್ಟಂಪಾಡಿ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಮತಾ, ಹಾಗೂ ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಆಯ್ಕೆಯಾದ ಬೆಟ್ಟಂಪಾಡಿ ಸ.ಹಿ.ಪ್ರಾ.ಶಾಲೆಯ ಅಧ್ಯಕ್ಷ ಶರೀಫ್ ಎನ್ ಅವರನ್ನು ಗೌರವಿಸಿ, ಸನ್ಮಾನಿಸಿ ಅಭಿನಂದಿಸಲಾಯಿತು.












