ನಾಳೆ ಬರೆಪ್ಪಾಡಿ ಶ್ರೀ ಕ್ಷೇತ್ರದಲ್ಲಿ 26ನೇ ವರ್ಷದ ಮಹಾ ಶಿವರಾತ್ರಿ ಮಹೋತ್ಸವ- ಅರ್ಧ ಏಕಾಹ ಭಜನಾ ಕಾರ್ಯಕ್ರಮ

0

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ 26ನೇ ವರ್ಷದ ಮಹಾ ಶಿವರಾತ್ರಿ ಮಹೋತ್ಸವ ಹಾಗೂ ಐಕ್ಯಮತ್ಯ ಸೂಕ್ತ ಜಪ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಫೆ.15ರಂದು ಭಕ್ತಿ ಸಡಗರದಲ್ಲಿ ನಡೆಯಲಿದೆ.


ಬೆಳಿಗ್ಗೆ 6.30ರಿಂದ ಸಂಜೆ 6.30ರವರೆಗೆ ಅರ್ಧ ಏಕಾಹ ಭಜನಾ ಕಾರ್ಯಕ್ರಮ, ಬೆಳಿಗ್ಗೆ 8.00ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಗಣಪತಿ ಹೋಮ ಹಾಗೂ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ ನಡೆಯಲಿದೆ. ಇದರೊಂದಿಗೆ ಐಕ್ಯಮತ್ಯ ಸೂಕ್ತ ಜಪ, ಭಾಗ್ಯ ಸೂಕ್ತ ಹಾಗೂ ಶ್ರೀ ಸೂಕ್ತ ಜಪಗಳು ಭಕ್ತರ ಸಮ್ಮುಖದಲ್ಲಿ ನೆರವೇರಲಿದೆ. ಮಧ್ಯಾಹ್ನ 11.30ರಿಂದ ಹೋಮದ ಪೂರ್ಣಾಹುತಿ, ಮಹಾಪೂಜೆ ಹಾಗೂ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6.30ರಿಂದ ಕುಣಿತ ಭಜನಾ ಕಾರ್ಯಕ್ರಮವು ನಡೆಯಲಿದ್ದು, ರಾತ್ರಿ 8.00ರಿಂದ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಜಿಯವರು ಆಶೀರ್ವಚನ ನೀಡಲಿದ್ದಾರೆ. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here