ಫೆ.22: ಶ್ರಿಸತ್ಯಸಾಯಿ ಮಂದಿರದ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು, ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯ, ಬೈಂದೂರು ಪ್ರಭಾಕರ್ ರಾವ್ ಮೆಮೋರಿಯಲ್ ಟ್ರಸ್ಟ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಫೆ.22ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಶ್ರಿಸತ್ಯಸಾಯಿ ಮಂದಿರದ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ರಿಂದ 11.30ರ ತನಕ ದಾಖಲಾತಿ ನಡೆಯಲಿದೆ. ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಚತೆ, ಹಲ್ಲು ಕೀಳುವಿಕೆ, ಕೃತಕದಂತ ಜೋಡಣೆ ಇತ್ಯಾದಿಗಳು ಲಭ್ಯವಿದೆ. ಕೆ.ವಿ.ಜಿ ದಂತ ಮಹಾವಿದ್ಯಾಲಯದ ಅನುಭವಿ ದಂತ ವೈದ್ಯರ ತಂಡ ಸೇವೆ ಸಲ್ಲಿಸಲಿದ್ದಾರೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here