ಮಾದಕ ದ್ರವ್ಯ ಸೇವನೆ : ವಿಟ್ಲಪಡ್ನೂರಿನ ವ್ಯಕ್ತಿ ವಶಕ್ಕೆ ; ಪ್ರಕರಣ ದಾಖಲು

0

ಪುತ್ತೂರು: ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಮೋಹಾದ್ (33 ವ.) ಬಂಧಿತ.

ಫೆ.17ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ವ್ಯಕ್ತಿಯೋರ್ವ ಸಿಗರೇಟ್‌ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಸದ್ರಿ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಮಹಮ್ಮದ್ ಮೋಹಾದ್ ಎಂಬಾತನು ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್‌ ಸೇದಿರುವುದೆಂದು ತಿಳಿದು ಬಂದಿದ್ದು, ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಕಲಂ 27(b) NDPS Act ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here