ಕೋಲ್ಪೆ: ಬೈಕ್ ಡಿಕ್ಕಿ- ಪಾದಚಾರಿಗೆ ಗಾಯ

0


ನೆಲ್ಯಾಡಿ: ಬೈಕ್ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ಫೆ.16ರಂದು ಸಂಜೆ ನಡೆದಿದೆ.


ಕೊಣಾಲು ನಿವಾಸಿ ಹಮೀದ್ (55ವ.)ಗಾಯಗೊಂಡವರಾಗಿದ್ದಾರೆ. ಇವರು ಫೆ.16ರಂದು ಸಂಜೆ ಮನೆಯಿಂದ ಹೊರಟು ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ಕೋಲ್ಪೆ ಮಸೀದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಉಪ್ಪಿನಂಗಡಿ ಕಡೆಯಿಂದ ಮೋಕ್ಷಿತ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ (ಕೆಎ 19, ಇಎಲ್-9483) ಡಿಕ್ಕಿಯಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಹಮೀದ್ ಅವರು ಪುತ್ತೂರು ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here