ಕಲ್ಲಾಜೆ: ಹೊಳೆಯಿಂದ ಮರಳು ಸಂಗ್ರಹ ಪತ್ತೆ

0

ಕಡಬ: ತಾಲೂಕಿನ ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಿಂದ ಅಕ್ರಮವಾಗಿ ಹಿಟಾಚಿ ವಾಹನದ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಮರಳು ಹಾಗೂ ವಾಹನ ವಶಪಡಿಸಿಕೊಂಡ ಘಟನೆ ಫೆ.16ರಂದು ನಡೆದಿದೆ.


ಬೆಳಿಗ್ಗೆ 10.30ಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿದಾಗ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಟಾಟಾ ಹಿಟಾಚಿ, ಈಚರ್ ಟಿಪ್ಪರ್ ಹಾಗೂ ಟಿಪ್ಪರ್ ಲಾರಿಯನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಅಲ್ಲದೇ ಅಂದಾಜು 50 ಸಾವಿರ ರೂ.ಮೌಲ್ಯದ 50 ಟನ್ ಮರಳು ಸಹ ವಶಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯ 20 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here