







ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್ ಶಿಬಿರವು ಪೂರಕ: ಡಾ.ರಾಜಾರಾಮ್ ಕೆ. ಬಿ


ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ಶ್ರಮದಾನದ ಜೊತೆಗೆ ಸಮಾಜದಲ್ಲಿರುವ ಸಮಸ್ಯೆಗಳನ್ನು ಅರಿತುಕೊಂಡು ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಮನೋಭಾವವನ್ನು ಶಿಬಿರಾರ್ಥಿಗಳು ಬೆಳೆಸಿಕೊಳ್ಳಬೇಕು. ಆ ಮೂಲಕ ಎನ್ ಎಸ್ ಎಸ್ ಶಿಬಿರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಲಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಡಾI ರಾಜಾರಾಮ್ ಕೆ.ಬಿರವರು ಹೇಳಿದರು.




ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ನನ್ನ ಭಾರತಕ್ಕಾಗಿ ಯುವಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಶಿರೋನಾಮೆಯೊಂದಿಗೆ
ಬೊಳುವಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಎನ್.ಎಸ್. ಎಸ್ ಶಿಬಿರದಲ್ಲಿ ಅತ್ಯಂತ ಸಕ್ರಿಯವಾಗಿ ಭಾಗವಹಿಸಿ ಯಶಸ್ಸು ಕಂಡುಕೊಳ್ಳಿ ಎಂದು ಹೇಳಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ರವಿರಾಜ್ ಎಸ್ ಇವರು, ಎನ್ ಎಸ್ ಎಸ್ ಕೇವಲ ಸಮಾಧಾನಕ್ಕೆ ಸೀಮಿತವಾಗದೆ ಸ್ವಯಂಸೇವಕರ ಸರ್ವತೋಮುಖ ಬೆಳವಣಿಗೆಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಮುಖಾಂತರ ಇದರ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭೆಯ ನಿಕಟ ಪೂರ್ವ ಸದಸ್ಯರಾದ ಸಂತೋಷ್ ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಅರ್ತಿಲ ಕೃಷ್ಣರಾವ್, ಹಿರಿಯ ವಿದ್ಯಾರ್ಥಿಯಾದ ಡಾI ಚಂದ್ರಶೇಖರ್, ಡಾ| ಕೆ ರವೀಂದ್ರ, ಬೊಳುವಾರು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರೇಷ್ಮಾ, ಶಾಲಾ ಮುಖ್ಯೋಪಾಧ್ಯಾಯಿನಿ ಮೋನಿಕಾ ಪಿ ಮಾಡ್ತಾ ಉಪಸ್ಥಿತರಿದ್ದರು.
ಶಿಬಿರಾಧಿಕಾರಿಯಾದ ಡಾ. ದೇವರಾಜ್ ಆರ್ ಸ್ವಾಗತಿಸಿ, ಕೇಶವ ಕುಮಾರ್ ಬಿ ವಂದಿಸಿದರು. ಶಿಬಿರಾರ್ಥಿಯಾದ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.









