ಕೂರೇಲು ಶ್ರೀ ಉಳ್ಳಾಕುಲು ಉಳ್ಳಾಲ್ತಿ ದೈವಸ್ಥಾನದಲ್ಲಿ ತಂಬಿಲ ಸೇವೆ, ಅನ್ನಸಂತರ್ಪಣೆ

0

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರಿನಿಂದ 8 ಕಿ.ಮೀ ದೂರದಲ್ಲಿ ಆರ್ಯಾಪು ಗ್ರಾಮದ ಕೂರೇಲು ಮಣ್ಣಿನಲ್ಲಿ ಆರಾಧನೆ ಪಡೆಯುತ್ತಿರುವ ಶ್ರೀ ಉಳ್ಳಾಕುಲು ಉಳ್ಳಾಲ್ತಿ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ದೈವಗಳಿಗೆ ತಂಬಿಲ ಸೇವೆಯು ಫೆ .19 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಜರಗಿತು.

ಬೆಳಿಗ್ಗೆ ಗಣಪತಿ ಹೋಮ, ಕಲಶ ಪೂಜೆ ನಡೆದು ಕಲಶಾಭಿಷೇಕ ಬಳಿಕ ತಂಬಿಲ ಸೇವೆ ಮಹಾಪೂಜೆ ನಡೆದು ಭಕ್ತಾಧಿಗಳಿಗೆ ಪ್ರಸಾದ, ಅನ್ನ ಪ್ರಸಾದ ವಿತರಣೆ ನಡೆಯಿತು. ಊರ ಪರವೂರು ನೂರಾರು ಭಕ್ತರು ಆಗಮಿಸಿ ಶ್ರೀ ದೈವದ ಪ್ರಸಾದ ಸ್ವೀಕರಿಸಿದರು. ಶ್ರೀ ದೈವಸ್ಥಾನದ ಆಡಳಿತ ಮೊಕ್ತಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಭಕ್ತಾಧಿಗಳಿಗೆ ಪ್ರಸಾದ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಸರಸ್ವತಿ ಸಂಜೀವ ಪೂಜಾರಿ, ಉಪನ್ಯಾಸಕ ಹರ್ಷಿತ್ ಕುಮಾರ್ ಕೂರೇಲು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here