







ಪುತ್ತೂರು :ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2025-26ರ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪುತ್ತೂರಿನ ನಿಲಿಷ್ಕಾ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ನಿಲಿಷ್ಕಾ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.
ದಿನೇಶ್ ಹಾಗೂ ಸ್ಮಿತಾಶ್ರೀ ದಂಪತಿ ಪುತ್ರಿಯಾಗಿರುವ ನಿಲಿಷ್ಕಾ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು.












