ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ- ಕೊಣಾಲು ಶಾಲೆಗೆ ಉತ್ತಮ ಎಸ್.ಡಿ.ಎಂ.ಸಿ ರಾಜ್ಯ ಪ್ರಶಸ್ತಿ

0

ನೆಲ್ಯಾಡಿ: ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ವತಿಯಿಂದ ಕೊಡಮಾಡುವ ಉತ್ತಮ ಎಸ್.ಡಿ.ಎಂ.ಸಿ ರಾಜ್ಯ ಪ್ರಶಸ್ತಿ ಕಡಬ ತಾಲೂಕಿನ ಕೊಣಾಲು ಸರಕಾರಿ ಉನ್ನತ ಹಿ.ಪ್ರಾ.ಶಾಲೆಗೆ ಲಭಿಸಿದೆ.
ಮಂಗಳೂರಿನ ಪುರಭವನದಲ್ಲಿ ನಡೆದ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಮಹಮ್ಮದ್ ರಫೀಕ್ ಅವರು ಪ್ರಶಸ್ತಿ ಸ್ವೀಕರಿಸಿದರು. ಕೊಣಾಲು ಶಾಲೆಯಲ್ಲಿ ಆಗಿರುವ ವಿವಿಧ ಅಭಿವೃದ್ಧಿ ಚಟುವಟಿಕೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here