ಹನುಮಗಿರಿ ಬ್ರಹ್ಮಕಲಶೋತ್ಸವ : ಸರ್ವ ಗ್ರಾಮ ಭಕ್ತರ ಸಮಾವೇಶ

0

ಮಾ. 2: ಶ್ರೀರಾಮ ತಾರಕ ಮಹಾಯಜ್ಞದ ಜಪದೀಕ್ಷೆ ಹಾಗೂ ಲಕ್ಷೋತ್ತರ ನಾರಿಕೇಳ ಸಮರ್ಪಣಾ ಕಾರ್ಯಕ್ರಮ

ಪುತ್ತೂರು: ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿಯಲ್ಲಿ ಏ.9 ರಿಂದ ಏ.12ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ, ಶ್ರೀ ರಾಮ ಹನುಮ ಜ್ಯೋತಿ ರಥಯಾತ್ರೆ, ಲಕ್ಷೋತ್ತರ ನಾರಿಕೇಳ ಸಮರ್ಪಣಾ ಯಜ್ಞ ಹಾಗೂ ಕೋಟಿ ಶ್ರೀರಾಮ ತಾರಕ ಮಂತ್ರ ಮಹಾಯಜ್ಞ ನಡೆಯಲಿದೆ. ಈ ಧಾರ್ಮಿಕ ಕಾರ್ಯಗಳಿಗೆ ಪುತ್ತೂರು, ಸುಳ್ಯ ಹಾಗೂ ಕಾಸರಗೋಡಿನ ಒಟ್ಟು 60 ಗ್ರಾಮ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಹನುಮಗಿರಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸರ್ವಗ್ರಾಮ ಭಕ್ತರ ಸಮಾಲೋಚನಾ ಸಭೆ’ಯು ಹನುಮಗಿರಿಯ ವೈದೇಹಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.


ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಾಜಿ ಸಂಸದ ನಳಿನ್‌ಕುಮಾರ್ ಕಟೀಲು ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಕೋಟಿ ಶ್ರೀರಾಮ ತಾರಕ ಮಹಾಯಜ್ಞದ ಜಪದೀಕ್ಷೆ ಹಾಗೂ ಲಕ್ಷೋತ್ತರ ನಾರಿಕೇಳ ಸಮರ್ಪಣಾ ಕಾರ್ಯಕ್ರಮ ಮಾ2ರಂದು ಕ್ಷೇತ್ರದಲ್ಲಿ ನಡೆಯಲಿದೆ. ಅಂದು ಪಾಲ್ಗೊಳ್ಳಲು ಸಾಧ್ಯವಾಗದ ಭಕ್ತರು ಬೇರೆ ದಿನಗಳಲ್ಲಿ ರಾಮ ಜಪದೀಕ್ಷೆ ಸ್ವೀಕರಿಸಬಹುದು.ರಾಮ ಜಪದೀಕ್ಷೆಗೆ ಕಡ್ಡಾಯ ದಿನವಿಲ್ಲ. ಯಾವುದೋ ಸೂತಕ ಎಂಬುವುದೂ ಇಲ್ಲ ಎಂದು ಹೇಳಿದರು.


ಜಾತ್ರೆ, ದೈವಗಳ ನೇಮ, ನಾಗಾರಾಧನೆ, ನಾಗಮಂಡಲ ಮೊದಲಾದ ಧಾರ್ಮಿಕ ಕಾರ್ಯಗಳು ದ.ಕ ಜಿಲ್ಲೆಯ ಜನತೆಯ ಮನೆ ಮಾತಾಗಿದೆ. ಎಲ್ಲರೂ ಸೇರಿಕೊಂಡು ಹನುಮಗಿರಿಯ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಸಿ ಇತಿಹಾಸ ಸೃಷ್ಟಿಸಲಿದೆ ಎಂದು ಹೇಳಿದರು.


ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಅವರು ಮಾತನಾಡಿ, ಇಂದು ವಿಭಾಗಾವಾರು ಬೈಠಕ್ ನಡೆಸಿ ಎಲ್ಲರ ಅಭಿಪ್ರಾಯಗಳನ್ನು ಪಡೆಯಲಾಗಿದೆ. ಮಾರ್ಚ್ 2 ರಂದು ಕೋಟಿರಾಮ ತಾರಕ ಮಹಾಯಜ್ಞದ ಜಪದೀಕ್ಷೆ ಕುಂಟಾರು ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರದಲ್ಲಿ ನೀಡಲಾಗುತ್ತದೆ. ಇದೇ ಸಂದರ್ಭದಲ್ಲಿ ಲಕ್ಷೋತ್ತರ ನಾರಿಕೇಳ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.ಇಷ್ಟರ ತನಕ ಆಗದ ರೀತಿಯಲ್ಲಿ ಬ್ರಹ್ಮಕಲಶೋತ್ಸವ,ಕೋಟಿ ಶ್ರೀರಾಮ ತಾರಕ ಮಹಾಯಜ್ಞ, ನಾರಿಕೇಳ ಸಮರ್ಪಣಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು.


ಕೋಟಿ ಶ್ರೀರಾಮ ತಾರಕ ಮಂತ್ರ ಮಹಾಯಜ್ಞದ ಜಪ ದೀಕ್ಷೆ ಹಾಗೂ ಲಕ್ಷೋತ್ತರ
ನಾರಿಕೇಳ ಸಮರ್ಪಣಾ ಸಮಾರಂಭ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ಮುರಳೀಕೃಷ್ಣ ಹಸಂತಡ್ಕ, ಸೀತಾರಾಮ ರೈ ಕೆದಂಬಾಡಿಗುತ್ತು, ಅರುಣ್ ಕುಮಾರ್ ಪುತ್ತಿಲ, ವಿದ್ಯಾ ಗೌರಿ, ಪರಮೇಶ್ವರಿ ಭಟ್ ಅವರು ಬೈಠಕ್‌ನಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ತಿಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಮುಖರಾದ ರವಿಕಿರಣ್ ಶೆಟ್ಟಿ ಬೆದ್ರಾಡಿ, ಸುಬ್ಬಪ್ಪ ಪಾಟಾಳಿ, ನಹುಷಾ ಭಟ್, ಪ್ರವೀಣ್ ಸರಳಾಯ, ಸವಿತಾ ರೈ ನೆಲ್ಲಿ ತ್ತಡ್ಕ ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಮ್ ಪಿ. ಶಿವರಾಮ ಶರ್ಮ ಕತ್ರಿಬೈಲು ಮತ್ತಿತರರು ಇದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಸಿ. ನಾರಾಯಣ ರೆಂಜ ವಂದಿಸಿದರು. ಸಾಮಾಜಿಕ ಜಾಲತಾಣದ ಪ್ರಮುಖ್ ಹರಿಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here