







ಉಪ್ಪಿನಂಗಡಿ: ಕೇಂದ್ರ ಸರಕಾರದ ಮೈ ಯುವ ಭಾರತ್ ಸ್ವಯಂ ಸೇವಕರುಗಳಿಗೆ ಯುವ ಆಪದ್ ಮಿತ್ರ ಯೋಜನೆಯಲ್ಲಿ ವಿಪತ್ತು ನಿರ್ವಹಣಾ ತರಬೇತಿ ಶಿಬಿರಕ್ಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 25 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.



ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ಆಶ್ರಯದಲ್ಲಿ ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ತರಬೇತಿ ಕೇಂದ್ರ ಪಿಲಿಕುಳ ಮಂಗಳೂರು ಇಲ್ಲಿ ಫೆ.23ರಿಂದ ಮಾ.1ರ ತನಕ ವಿಪತ್ತು ನಿರ್ವಹಣಾ ತರಬೇತಿ ಶಿಬಿರ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 250 ಮಂದಿ ಸ್ವಯಂ ಸೇವಕರುಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.












