ವಾಣಿಯನ್/ಗಾಣಿಗ ಸಮುದಾಯ ಸಂಘದಿಂದ ಪ್ರಹ್ಲಾದ್ ಮೋದಿಯವರಿಗೆ ಸನ್ಮಾನ

0

ಪುತ್ತೂರು: ಪುತ್ತೂರಿನ ಕೊಟೇಚಾ ಹಾಲ್‌ನಲ್ಲಿ ಮಾ.೧ರಂದು ನಡೆದ ಗಾಣಿಗ ಸಮಾಜದ ಜಿಲ್ಲಾ ಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮಕ್ಕೆ ಅಗಮಿಸಿದ್ದ, ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹೆಗಾರರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದೀಜಿಯವರು ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪುತ್ತೂರಿನ ವಾಣಿಯನ್/ಗಾಣಿಗ ಸಮುದಾಯ ಸೇವಾ ಸಂಘದಿಂದ ಅವರನ್ನು ಸನ್ಮಾನಿಸಿ, ಗೌರವಿಸಿದರು.


ವಾಣಿಯನ್/ಗಾಣಿಗ ಸಮುದಾಯ ಸೇವಾ ಸಂಘದ ಅಧ್ಯಕ್ಷ ಪ್ರಸಾದ್ ಕಲ್ಲರ್ಪೆ, ಕಾರ್ಯದರ್ಶಿ ಜಯಲಕ್ಷ್ಮೀ, ಮಾಜಿ ಅಧ್ಯಕ್ಷ ದಮೋದರ ಪಾಟಾಳಿ, ಜಿಲ್ಲಾ ಸಂಘದ ಕಾರ್ಯದರ್ಶಿ ಚಂದ್ರಶೇಖರ ಪನ್ನೆ ಮೊದಲಾವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here