ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮನ

0

ಪುತ್ತೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೆಗೌಡ ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿವಿಐಪಿ ಅತಿಥಿಗೃಹಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂದಿ ಮಾಜಿ ಪ್ರಧಾನಿಯವರನ್ನು ಸ್ವಾಗತಿಸಿ, ಬರಮಾಡಿಕೊಂಡರು. ಅತಿಥಿ ಗೃಹದಲ್ಲಿ ವಸತಿ ಪಡೆದು ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಂಡರು.

ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವಗೌಡ, ರಾಜ್ಯವಕ್ತಾರರಾದ ಎಂ.ಬಿ ಸದಾಶಿವ, ದಯಾಕರ್ ಆಳ್ವ, ಸಂತೋಷ್ ಜಾಕೆ, ಮಾಜಿ ಜಿಲ್ಲಾ ಪಂಚಾಯತ್ ಸಯ್ಯದ್ ಮೀರಾ ಸಾಹೇಬ್, ಕೇನ್ಯ ರವೀಂದ್ರನಾಥ ಶೆಟ್ಟಿ, ಶಶಿರಾಜ್ ಶೆಟ್ಟಿ ಮಂಗಳೂರು, ಉಮೇಶ್ ಕುಮಾರ್ ಗೌಡ ಬಂಟ್ವಾಳ, ಚಂದ್ರಶೇಖರ ಗೌಡ ಕೋಡಿಂಬಾಳ, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಹಾಗೂ ವೈದ್ಯಾಧಿಕಾರಿ ಡಾ. ಮಂಜುನಾಥ್, ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಹಾಗೂ ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here