ಕೊಂಬೆಟ್ಟು ಪ್ರೌಢಶಾಲೆಯಲ್ಲಿ ಶೆರ್ವಿನ್ ವಿಲಿಯಮ್ಸ್ ಕಂಪನಿ ಪ್ರಾಯೋಜಿತ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ

0

ಪುತ್ತೂರು: ಅಂತಾರಾಷ್ಟ್ರೀಯ ಶರ್ವಿನ್ ವಿಲಿಯಮ್ಸ್ ಕಂಪನಿಯ ಅಂಗ ಸಂಸ್ಥೆಯಾದ ವಾಲ್ಸ್ಫರ್ ಇಂಡಿಯಾ ಕೋಟಿಂಗ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ವತಿಯಿಂದ ಪ್ರಾಯೋಜಿಸಲ್ಪಟ್ಟ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮವು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ನೆರವೇರಿತು.


ವಾಲ್ಸ್ಫರ್ ಕೋಟಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಹಿರಿಯ ಅಧಿಕಾರಿಯಾಗಿರುವ ರತನ್ ರೈ ಶಾಲೆಗೆ ಆಗಮಿಸಿ 15 ಕಂಪ್ಯೂಟರ್ ಗಳ ಸುಸಜ್ಜಿತ ಕಂಪ್ಯೂಟರ್ ಪ್ರಯೋಗಾಲಯ, ಗ್ರೀನ್ ಬೋರ್ಡ್ ಗಳು, ಟೇಬಲ್, ಚೈರ್, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಶಾಲೆಗೆ ನೀಡಿದರು. ಬಳಿಕ ಅವರು ಮಾತನಾಡಿ ” ಕಂಪೆನಿಯ ಸಾಮಾಜಿಕ ಸೇವೆಯ ಜವಾಬ್ದಾರಿಯ ನೆಲೆಯಲ್ಲಿ ಸರಕಾರಿ ಶಾಲೆಗಳನ್ನು ಮೂಲಭೂತ ಸೌಕರ್ಯಗಳಲ್ಲಿ ಉತ್ತಮೀಕರಿಸುವ ಉದ್ದೇಶವನ್ನು ನಾವು ಹೊಂದಿದ್ದು ಇದುವರೆಗೆ ನೂರಕ್ಕಿಂತಲೂ ಹೆಚ್ಚು ಸರಕಾರಿ ಶಾಲೆಗಳಿಗೆ ಕಂಪೆನಿಯು ಕೊಡುಗೆಗಳನ್ನು ನೀಡಿದೆ. ಗ್ರಾಮೀಣ ಭಾಗದ ಶಾಲೆಗಳನ್ನು ಸಮೃದ್ಧಗೊಳಿಸುವುದು ಕಂಪನಿಯ ಮುಖ್ಯ ಉದ್ದೇಶ ಎಂದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ರತನ್ ರೈ ಯವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಉದ್ಯಮಿ ಜನಾರ್ಧನ ರೈ ಪಡ್ಡಂಬೈಲು, ಎಸ್.ಡಿಎಂಸಿ ಅಧ್ಯಕ್ಷ ಸುರೇಶ್ ರೈ ಪಡ್ಡಂಬೈಲು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ವಸಂತ ಮೂಲ್ಯ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ಶಿಕ್ಷಕ ನಾಗರಾಜ ಭಟ್ ವಂದಿಸಿದರು. ಶಿಕ್ಷಕ ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಶಿಕ್ಷಕರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here