ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಆಮಂತ್ರಣ ಪತ್ರ ಬಿಡುಗಡೆ

0

ನಿಡ್ಪಳ್ಳಿ; ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು, ಇರ್ದೆ, ಬೆಟ್ಟಂಪಾಡಿ, ಪಾಣಾಜೆ, ನಿಡ್ಪಳ್ಳಿ ಘಟಕ ಇದರ ಆಶ್ರಯದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ ಈಶ್ವರಾಂಭ ಟ್ರಸ್ಟ್ ಮತ್ತು ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಅಂಬುಲೆನ್ಸ್ ಸೇವೆಯ 3 ನೇ ವರ್ಷದ ಪಾದಾರ್ಪಣೆ ಪ್ರಯುಕ್ತ 29 ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಾ.8 ರಂದು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದ್ದು ಅದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಮಾ.3 ರಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು.

 ಪುತ್ತಿಲ ಪರಿವಾರ ಟ್ರಸ್ಟ್  ಸ್ಥಾಪಕರಾದ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ,  ಪ್ರಧಾನ ಕಾರ್ಯದರ್ಶಿ ಪ್ರೆಮ್ ರಾಜ್ ಅರ್ಲಪದವು,ಇರ್ದೆ ಬೆಟ್ಟಂಪಾಡಿ ಘಟಕದ ಅಧ್ಯಕ್ಷ  ಸುಜಿತ್ ಕಜೆ ಮತ್ತು ಟ್ರಸ್ಟ್ ನ  ನಿರ್ದೇಶಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here