






ಪುತ್ತೂರು: ಆನೆ ದಂತವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಕಡಬದ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಕಡಬದಲ್ಲಿ ಮಟನ್ ಸ್ಟಾಲ್ ನಡೆಸುತ್ತಿರುವ ತಾಜುದ್ಧೀನ್ ಎಂಬಾತ ಆನೆ ದಂತಗಳನ್ನು ಸಂಗ್ರಹಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಸಂಚು ರೂಪಿಸಿರುವ ಆರೋಪದಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಖಚಿತ ಮಾಹಿತಿಯ ಆಧಾರದಲ್ಲಿ ಮಂಗಳೂರಿನಿಂದ ಕಡಬಕ್ಕೆ ಆಗಮಿಸಿದ ಮಂಗಳೂರಿನ ಪೊಲೀಸರ ತಂಡ ಮಾ.2ರಂದು ಕಡಬದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮಾಲು ಸಮೇತ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.



ಸುಮಾರು 26 ಕೆಜಿ ತೂಕದ ಆನೆ ದಂತವನ್ನು ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.










