







ಪುತ್ತೂರು: ಬಂಟ್ವಾಳ ತಾಲೂಕಿನ ಮಾಣಿಗೆ ಹಾಗೂ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮಕ್ಕೆ ಬಜೆಟ್ ನಲ್ಲಿ ಹೊಸ ಪೊಲೀಸ್ ಠಾಣೆ ಮಂಜೂರಾಗಿದೆ.


ಬೆಂಗಳೂರು, ಬೆಳಗಾವಿ, ಯಾದಗಿರಿ ಸೇರಿದಂತೆ 11 ಜಿಲ್ಲೆಗಳಿಗೆ ಒಟ್ಟು 12 ಹೊಸ ಪೊಲೀಸ್ ಠಾಣೆಗಳು ಮಂಜೂರಾಗಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ 2 ಪೊಲೀಸ್ ಠಾಣೆಗಳು ಮಂಜೂರಾಗಿದೆ. ಹೊಸ ಠಾಣೆಗಳು ಮಂಜೂರಾಗಿರುವ ಸಜೀಪನಡು ಹಾಗೂ ಮಾಣಿ ಪ್ರದೇಶ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಟ್ಟಿತ್ತು. ಹೊಸ ಠಾಣೆ ನಿರ್ಮಾಣವಾದ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಹೊರೆ ಕಡಿಮೆಯಾಗಲಿದೆ.













