







ಪುತ್ತೂರು ; ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿರುವ ಡಾ.ಹಾಜಿ. ಎಸ್ ಅಬೂಬಕರ್ ಆರ್ಲಪದವು ಅವರು ನಿಡ್ಪಳ್ಳಿ ವಲಯದ ಕಾಂಗ್ರೆಸ್ ಉಸ್ತುವಾರಿಯಾಗಿ ಆಯ್ಕೆಯಾದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಶಿಫಾರಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ನೇಮಕ ಮಾಡಿ ಆದೇಶಿಸಿದ್ದಾರೆ.


ಅಬೂಬಕ್ಕರ್ ಆರ್ಲಪದವು ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಡಾ.ಹಾಜಿ. ಎಸ್ ಅಬೂಬಕರ್ ಆರ್ಲಪದವು ಇವರು ಪ್ರಸಕ್ತ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.













