ನಾಳೆ ಮಾ.8ಕ್ಕೆ ಪುತ್ತೂರಿನಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ’ಮಹಿಳಾ ಸಂಭ್ರಮ’

0

ಪುತ್ತೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಯಶಸ್ವಿ ಹಿನ್ನಲೆಯಲ್ಲಿ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಮಾ.8ರಂದು ‘ಮಹಿಳಾ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಉಷಾ ಅಂಚನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ 9 ಬ್ಲಾಕ್‌ಗಳ ವ್ಯಾಪ್ತಿ ಹೊಂದಿರುವ ಗ್ರಾಮಾಂತರ ಮಹಿಳಾ ಕಾಂಗ್ರೇಸ್ ವತಿಯಿಂದ ಪುತ್ತೂರಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9.30ಕ್ಕೆ ಕಾಂಗ್ರೇಸ್ ಮುಖಂಡರಾದ ಕಾವು ಹೇಮನಾಥ ಶೆಟ್ಟಿ ಹಾಗೂ ಅನಿತಾ ಹೇಮನಾಥ ಶೆಟ್ಟಿ ದಂಪತಿ ಉಪಸ್ಥಿತಿಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬೆಳಿಗ್ಗೆ ಗಂಟೆ 11.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವೆ ಮೋಟಮ್ಮ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಅಶೋಕ್ ರೈ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೆಸ್ಕಾಂ ನಿಗಮದ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಪದ್ಮರಾಜ್ ಪೂಜಾರಿ, ಐವಾನ್ ಡಿಸೋಜ, ನಿಗಮ ಅಧ್ಯಕ್ಷರಾದ ಶಾಲೆಟ್ ಪಿಂಟೊ, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಮಾಜಿ ಸೈನಿಕರಾದ ಅಲ್ಫೋನ್ಸಾ ನೆಲ್ಯಾಡಿ, ಚರಿಷ್ಮಾ ರೈ, ಡಾ.ಶೆರಿಲ್ಲಾ ಭಾಗವಹಿಸಲಿದ್ದಾರೆ. ಸಮಾಜದಲ್ಲಿ ಮಹಿಳೆಯರ ಪಾತ್ರ ವಿಚಾರದ ಕುರಿತು ಡಾ.ಶೆರಿಲ್ಲಾ ಅವರು ಉಪನ್ಯಾಸ ನೀಡಲಿದ್ದಾರೆ ಎಂದವರು ಹೇಳಿದರು.


ಪ್ರಿಯದರ್ಶಿನಿ ವೀರನಾರಿ ಪ್ರಶಸ್ತಿ
ಮೊತ್ತ ಮೊದಲ ಬಾರಿಗೆ ಮಹಿಳಾ ಕಾಂಗ್ರೇಸ್ ವತಿಯಿಂದ 8 ಮಂದಿ ಮಾಜಿ ಮಹಿಳಾ ಸೈನಿಕರಿಗೆ ‘ಪ್ರಿಯದರ್ಶಿನಿ ವೀರನಾರಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸೈನ್ಯದಲ್ಲಿ ಕೆಲಸ ಮಾಡಿ ನಿವೃತ್ತರಾದ ಅಲ್ಫೋನ್ಸಾ ನೆಲ್ಯಾಡಿ, ಸ್ಯಾಂಡಿ ಸೆಬಾಸ್ಟಿನ್, ಮಿನಿ ಸಂತೋಷ್, ಲಿಸ್ಸಿ ಡೊಮಿನಿಕ್, ಸವಿತಾ ವಿಕ್ರಂ ಶೆಟ್ಟಿ, ಕಮಲಾಕ್ಷಿ, ಯಶೋದಾ ಹಾಗೂ ಶಕುಂತಳಾ ನಾಯ್ಕ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದರ ಜತೆಗೆ ವಿವಿಧ ಕ್ಷೇತ್ರಗಳ ಸಾಧಕ ಮಹಿಳೆಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರನ್ನು ಗೌರವಿಸಲಾಗುವುದು ಎಂದು ಉಷಾ ಅಂಚನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಅನಿತಾ ಹೇಮನಾಥ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಮಿತಾ ಡಿ ರಾವ್, ಜಿಲ್ಲಾ ಉಪಾಧ್ಯಕ್ಷೆ ಚಂದ್ರಕಲಾ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಿ ಮಿನೇಜಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here