ಮಾ.10: ಬಿಳಿನೆಲೆ ಗ್ರಾಮ ಪಂಚಾಯತ್‌ನಲ್ಲಿ ಗ್ಯಾರಂಟಿ ಶಿಬಿರ ಹಾಗೂ ಮಹಿಳಾ ದಿನಾಚರಣೆ

0

ಕಡಬ: ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಮಾರ್ಚ್ 10ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಿಳಿನೆಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ನೋಂದಾವಣಿಯ ಬಾಕಿ ಇರುವ ಹಾಗೂ ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ನಡೆಯಲಿದೆ.


ಈ ಕಾರ್ಯಕ್ರಮದ ಅಂಗವಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನೂ ಕೂಡ ಆಚರಿಸಲಾಗುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯಲು ಇನ್ನೂ ನೋಂದಾವಣೆ ಮಾಡದವರು ಹಾಗೂ ತಿರಸ್ಕೃತ ಅರ್ಜಿಗಳ ಕುರಿತು ಮಾಹಿತಿ ಪಡೆಯಲು ಸಂಬಂಧಿಸಿದವರು ಶಿಬಿರದಲ್ಲಿ ಭಾಗವಹಿಸುವಂತೆ ಅಲ್ಲದೆ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಗ್ಯಾರಂಟಿ ಅನುಷ್ಠಾನ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here