ಉಪ್ಪಿನಂಗಡಿ: ಕಾರು ಡಿಕ್ಕಿ – ಬೈಕ್ ಸವಾರ ಮೃತ್ಯು

0

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ಮಾ.8ರಂದು ನಡೆದಿದೆ.


ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ , ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.


ಉತ್ತಮ ಜನಸ್ನೇಹಿ, ಪರೋಪಕಾರಿ ಗುಣದೊಂದಿಗೆ ಜನಾನುರಾಗಿ ವ್ಯಕ್ತಿತ್ವದ ಮೃತರು ತಾಯಿ, ಪತ್ನಿ, ಹೆಣ್ಣು 1ಗಂಡು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here