ನೆಲ್ಯಾಡಿ; ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನದ ವಠಾರದಲ್ಲಿ ಬಾಗಿದ ಮರಗಳ ತೆರವು ಹಾಗೂ ದೇವಸ್ಥಾನದ ಆವರಣ ಸ್ವಚ್ಛತಾ ಶ್ರಮದಾನ ನಡೆಯಿತು.


ಶ್ರಮದಾನದ ಬಳಿಕ ಮಾರ್ಚ್ ತಿಂಗಳ ಮಾಸಿಕ ಸಭೆಯನ್ನು ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶೌರ್ಯ ಘಟಕ ಪ್ರತಿನಿಧಿ ರಮೇಶ್ ಬಾಣಜಾಲು ವಹಿಸಿದ್ದರು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಅವರು ಸ್ವಯಂ ಸೇವಕರಿಗೆ ಮಾಹಿತಿ, ಮಾರ್ಗದರ್ಶನ ನೀಡಿದರು. ವಿಷ್ಣುಮೂರ್ತಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ.ಯಸ್. ಕೃತಜ್ಞತೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುಬ್ರಹ್ಮಣ್ಯ ಶಬರಾಯ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಾಜೆ, ಜೊತೆ ಕಾರ್ಯದರ್ಶಿ ಶಿವಪ್ರಸಾದ್, ಪ್ರಗತಿಪರ ಕೃಷಿಕ ರಾಮಚಂದ್ರ ಶೆಟ್ಟಿ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಘಟಕ ಸ್ವಯಂ ಸೇವಕರಾದ ಜೋಬಿ ಮತ್ತಾಯಿ, ಸಂತೋಷ್ ಕುಮಾರ್, ರಮೇಶ್ ಬಿ., ಪದ್ಮಕುಮಾರ್, ಚಂದ್ರ ಕೆ.ಯನ್., ಗೀತಾ, ಜಯಂತಿ ಉಪಸ್ಥಿತರಿದ್ದರು. ಘಟಕ ಸಂಯೋಜಕಿ ನಮಿತಾ ಎಸ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಘಟಕ ಸ್ವಯಂ ಸೇವಕಿ ಕುಸುಮ ವಂದಿಸಿದರು.

LEAVE A REPLY

Please enter your comment!
Please enter your name here