ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವ ಕಿರಣ್ ಭಟ್ ಬೈಪದವು ಆಯ್ಕೆ

0

ವಿಟ್ಲ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವ ಕಿರಣ್ ಭಟ್ ಬೈಪದವುರವರು ಆಯ್ಕೆಯಾಗಿದ್ದಾರೆ.

​ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವ ಕಿರಣ್ ಭಟ್ ಬೈಪದವುರವರನ್ನು ಆಯ್ಕೆ ಮಾಡಿದ್ದಾರೆ.


​ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಜಿಲ್ಲೆಯ ವಿವಿಧ ಭಾಗಗಳ ಸಕ್ರಿಯ ಕಾರ್ಯಕರ್ತರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.
ಶಿವ ಕಿರಣ್ ಭಟ್ ರವರು ಈ ಭಾಗದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿರುವ ನಿಟ್ಟಿನಲ್ಲಿ ಅವರಿಗೆ ಜವಾಬ್ದಾರಿ ನೀಡಲಾಗಿದೆ‌. ಇವರು ಇಡ್ಕಿದು ಸೇವಾಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಬೈಪದವುರವರ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here