







ಪುತ್ತೂರು: ಮಾ.11ರಂದು ಬೆಳಿಗ್ಗೆ ಕೌಡಿಚ್ಚಾರು ಪ್ರಧಾನ ರಸ್ತೆಯ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೂಡಲೇ ಸ್ಥಳೀಯರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.


ಸಂಪ್ಯ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ವ್ಯಕ್ತಿ ನಿನ್ನೆ ಸಂಜೆ ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.













