







ಪುತ್ತೂರು: ಕಲಿಯುಗದ ಕಾಮಧೇನು ಕಲ್ಲಾರೆಯಲ್ಲಿರುವ ಶ್ರೀ ಗುರರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿ ಪ್ರತಿಷ್ಠೆಯ ವಾರ್ಷಿಕೋತ್ಸವ ಮತ್ತು 25ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಾ.14ರಂದು ನಡೆಯಲಿದೆ. ಇದೇ ಸಂದರ್ಭ ಶ್ರೀ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.


ಮಾ.14ರ ಬೆಳಿಗ್ಗೆ ಪಂಚಗವ್ಯ ಪುಣ್ಯಾಹ ಪುರಸ್ಸರ ಕಲಶ ಪ್ರತಿಷ್ಠೆ, ಉದ್ಯಾಪನಾ ಹೋಮ, ಪಂಚಾಮೃತಾಭಿಷೇಕ, ಕಲಶಾಭಿಷೇಕದ ಬಳಿಕ ಶ್ರೀ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 10ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಧ್ಯಾಹ್ನ ಗಂಟೆ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಮಠದ ಕಾರ್ಯದರ್ಶಿ ಯು.ಪೂವಪ್ಪ ಅವರು ತಿಳಿಸಿದ್ದಾರೆ.












