







ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಾ.11ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀಮಹಾವಿಷ್ಣುಮೂರ್ತಿ ಭಜನಾ ಮಂಡಳಿ ವತಿಯಿಂದ 44ನೇ ವರ್ಷದ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.


ಬೆಳಿಗ್ಗೆ 9 ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಾಭಿಷೇಕ, ಸೀಯಾಳಾಭೀಷೇಕ, ಪವಮಾನಾಭಿಷೇಕ, ಆಶ್ಲೇಷ ಬಲಿ, ನಾಗತಂಬಿಲ ಮಧ್ಯಾಹ್ನ ಮಹಾಪೂಜೆ, ಸಂಜೆ 5ರಿಂದ ಭಜನೆ, ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ದೇವಾಲಯದ ಆಡಳಿತ ಮೊಕ್ತೇಸರರಾದ ಶ್ರೀಪತಿ ಬೈಪಾಡಿತ್ತಾಯ, ಕಾರ್ಯದರ್ಶಿ ರಾಜೇಶ್ ಹೊಸಹೊಕ್ಲು, ಶ್ರೀಮಹಾವಿಷ್ಣುಮೂರ್ತಿ ಭಜನಾ ಮಂಡಳಿ ಗೌರವಾಧ್ಯಕ್ಷ ನರೇಂದ್ರ ಪಡಿವಾಳ್ ಮೂಡಾಯೂರುಗುತ್ತು, ಅಧ್ಯಕ್ಷ ಉಮಾವತಿ ಹೊನ್ನಪ್ಪ ಗೌಡ ಹಾಗೂ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.













