







ಕಡಬ: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ, ಕೃಷಿ ವಿಜ್ಞಾನ ಕೇಂದ್ರ(ದ.ಕ.)ಮಂಗಳೂರು, ಸಮೇತಿ(ದಕ್ಷಿಣ) ಕೃಷಿ ವಿಶ್ವವಿದ್ಯಾನಿಲಯ ಜೆಕೆವಿಕೆ ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ ಹೈದರಾಬಾದ್ ಮತ್ತು ಕೃಷಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ 2023-24ನೇ ಸಾಲಿನ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯ ಡಿಪ್ಲೋಮಾ ಪದವಿಯಲ್ಲಿ ಕಡಬ ತಾಲೂಕಿನ ಬಲ್ಯ ಗ್ರಾಮದ ದೇರಾಜೆಯ ಕಾವ್ಯ ನರೇಶ್ ಅವರು ಕಂಚಿನ ಪದಕದೊಂದಿಗೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು ದೇರಾಜೆ ನಿವಾಸಿ, ಸಿವಿಲ್ ಇಂಜಿನಿಯರ್ ನರೇಶ್ ಡಿ.ಎಸ್.ಅವರ ಪತ್ನಿ.












