






ನೆಲ್ಯಾಡಿ; ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆ ನೆಲ್ಯಾಡಿ ಇದರ 2025-26ನೇ ವರ್ಷದ ಯುಕೆಜಿ ಮಕ್ಕಳ ಪದವಿ ಪ್ರಧಾನ ಕಾರ್ಯಕ್ರಮ ಮಾ.14ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.



ಖತೀಬ್ ಇಬ್ರಾಹಿ ಸಖಾಪಿ ಉಸ್ತಾದ್ ಅವರ ದುಆ ನೆರವೇರಿಸಿ, ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಅಧ್ಯಕ್ಷರಾದ ನಾಝೀಮ್ ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಬದ್ರಿಯಾ ಜಮಾ ಮಸೀದಿಯ ಅಧ್ಯಕ್ಷರಾದ ಎನ್. ಇಸ್ಮಾಯಿಲ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಅತಿಥಿಯಾಗಿ ಆಗಮಿಸಿದ ನೆಲ್ಯಾಡಿ ಬದ್ರಿಯಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಎನ್.ಎಸ್.ಸುಲೈಮಾನ್ ಶುಭ ಹಾರೈಸಿದರು. ಇಸ್ಮಾಯಿಲ್ ಸಹದಿ ಸದರ್ ಉಸ್ತಾದ್, ಸಂಸ್ಥೆಯ ಉಪಾಧ್ಯಕ್ಷರಾದ ಅಬ್ದುಲ್ ರಝಾಕ್, ಸಿದ್ದೀಕ್ ಎಂ. ರಫೀಕ್ ಅಲಂಪಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯುಕೆಜಿಯ ೨೮ ಮಕ್ಕಳಿಗೆ ಪದವಿ ಪ್ರದಾನ ಮಾಡಲಾಯಿತು. ಚಿಕ್ಕಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳನ್ನು ಗೌರವಿಸಲಾಯಿತು. ನೆಲ್ಯಾಡಿ ಬದ್ರಿಯಾ ಜುಮಾ ಮಸ್ಜಿದ್‌ನ ಖತೀಬ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಇಸ್ಮಾಯಿಲ್ ಕೆ.ಆರ್.ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕಿ ಸೀಮಾ ಡೈನೀಸ್ ವಂದಿಸಿದರು. ಶಿಕ್ಷಕಿ ಸಾಜಿದ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.













